ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಆರ್​ಇ ಡಿಜಿಪಿ ರಾಮಚಂದ್ರ ರಾವ್ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ಆಗಿದೆ.
ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ.
ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್​​ ಕಚೇರಿಯಲ್ಲಿ ಕುಳಿತು ಪೊಲೀಸ್​ ಯೂನಿಫಾರಂನಲ್ಲಿಯೇ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್​​ ಆದ ವಿಡಿಯೋದಲ್ಲಿವೆ.

ಚೇರ್ ಮೇಲೆ ಕುಳಿತು ಮಹಿಳೆಯನ್ನ ಅಪ್ಪಿಕೊಂಡು ಪಿಐಎಸ್ ಅಧಿಕಾರಿ ಸರಸ ನಡೆಸಿದ್ದು, ಇದು ರನ್ಯಾರಾವ್​ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್​ ಚಿನ್ನ ಕಳ್ಳಸಾಗಾಣಿಕೆ ಕೇಸ್​​ನಕಲ್ಲಿ ಸಿಕ್ಕಿ ಒದ್ದಾಡುತ್ತಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್​​ ಆಗಿರೋದು ಜನ ಹುಬ್ಬೇರುವಂತೆ ಮಾಡಿದೆ.

- Advertisement - 

ದುಬೈನಿಂದ ಈ ಹಿಂದೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು.

ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿತ್ತು.

- Advertisement - 

ಈ ರಾಮಚಂದ್ರ ರಾವ್ ಯಾರು​​?:
ಕರ್ನಾಟಕ ಕೇಡರ್​​​ನ ಕೆ. ರಾಮಚಂದ್ರ ರಾವ್ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ ಲಿಮಿಟೆಡ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ಸೇವೆ ಸಲ್ಲಿಸಿದ್ದರು.

 2023ರಲ್ಲಿ ಇವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಡಿಜಿಪಿ ಮತ್ತು ಅಧ್ಯಕ್ಷ ಮತ್ತು ಎಂಡಿ ಆಗಿ ಬಡ್ತಿ ನೀಡಲಾಗಿತ್ತು.
ಬಳಿಕ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ನೇಮಕಗೊಂಡಿದ್ದರು. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇವರ ಮಲಮಗಳು ರನ್ಯಾ ರಾವ್ ಭಾಗಿ ಪ್ರಕರಣ ಸಂಬಂಧ ಪೊಲೀಸರ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಮಾರ್ಚ್
2025ರಲ್ಲಿ ಇವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.

ಇಲಾಖೆಗೆ ಅಪಮಾನ:
ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ವಿಚಾರ ಸಂಬಂಧ ಅಧಿಕಾರಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.  ಹಿಂದೆಯೂ ರಾಮಚಂದ್ರ ರಾವ್ ಇದೇ ರೀತಿ ನಡೆದುಕೊಂಡಿದ್ದರು
, ಆದರೂ ಇಲಾಖೆಯಲ್ಲಿ ಮುಂದುವರಿದಿದ್ದಾರೆ. ಕಚೇರಿಯಲ್ಲೇ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿರೋದು, ಗೃಹ ಇಲಾಖೆಗೆ ದೊಡ್ಡ ಅಪಮಾನ ಎಂದು ವಾಗ್ದಾಳಿ ಮಾಡಿದ್ದಾರೆ.

Share This Article
error: Content is protected !!
";