ಧರ್ಮಸ್ಥಳದ ಪ್ರಕರಣ NIA ತನಿಖೆಗೆ ವಹಿಸಲಿ-ನಿಖಿಲ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರವನ್ನು ರಾಜ್ಯ ಸರ್ಕಾರ
NIA ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡ ಧರ್ಮಸ್ಥಳ ಸತ್ಯಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭಕ್ತಪೂರ್ವಕವಾಗಿ ಸತ್ಕರಿಸಿ, ಅವರ ಆಶೀರ್ವಾದ ಪಡೆದು, ಕಾರ್ಯಕ್ರಮ ಉದ್ದೇಶಿಸಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹ ಮಾಡಿದರು. 

ಸಹಸ್ರಾರು ಭಜನಾ ಮಂಡಳಿಗಳು, ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಲಕ್ಷಾಂತರ ಕುಟುಂಬಗಳಿಗೆ ನೀಡಿರುವ ಆರ್ಥಿಕ ಸಹಾಯ, ಲಕ್ಷಾಂತರ ಜನರಿಗೆ ನೀಡಿರುವ ನ್ಯಾಯ, ಲಕ್ಷಾಂತರ ವಿದ್ಯಾರ್ಥಿಗಳಿಗೆ ನೀಡಿರುವ ವಿದ್ಯಾದಾನ, ಕೋಟ್ಯಾಂತರ ಜನರಿಗೆ ನಡೆಯುವ ಅನ್ನದಾನ ಇವೆಲ್ಲವೂ ನಿತ್ಯವೂ ನಡೆಯಬೇಕು, ಕೋಟ್ಯಾಂತರ ಭಕ್ತರ ಸೇವೆ ಮಾಡುತ್ತಿರುವ ಪೂಜ್ಯ ಖಾವಂದರಾದ ವೀರೇಂದ್ರ ಹೆಗ್ಗಡೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದೊಂದಿಗೆ ನಾವೆಲ್ಲರೂ ಇದ್ದೇವೆ ಎಂದು ನಿಖಿಲ್ ತಿಳಿಸಿದರು.

- Advertisement - 

ಇದೇ ವೇಳೆ ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರಗಳ ಹಿಂದಿರುವ ಕಾಣದ ಕೈಗಳನ್ನು ಹಾಗೂ ದುಷ್ಟಶಕ್ತಿಗಳನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( NIA)ಗೆ ವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು‌.

ಈ ಸಂದರ್ಭದಲ್ಲಿ ಪೂಜ್ಯ ಖಾವಂದರ ಸಹೋದರರಾದ ಸುರೇಂದ್ರ ಜೈನ್, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಲೋಕಸಭಾ ಸದಸ್ಯ ಮಲ್ಲೇಶ್ ಬಾಬು, ವಿಧಾನಪರಿಷತ್ ಸದಸ್ಯ ಬೋಜೆಗೌಡ, ರಾಜ್ಯ ಕೋರ ಕಮಿಟಿ ಸದಸ್ಯ ವೆಂಕಟರಾವ್ ನಾಡಗೌಡ, ಮಾಜಿ ಸಚಿವ ಎ. ಮಂಜು, ಶಾಸಕರಾದ ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ಮಾಜಿ ಶಾಸಕರಾದ ಸುರೇಶ್ ಗೌಡ, ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಗೌಡ , ದೇವದುರ್ಗ ಶಾಸಕಿ ಕರೇಯಮ್ಮ ನಾಯಕ್, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ,

- Advertisement - 

ಕೆ.ಆರ್. ಪೇಟೆ ಶಾಸಕ ಮಂಜುನಾಥ, ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ , ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ ನಾಯ್ಕ್, ಹರಿಹರ ಮಾಜಿ ಶಾಸಕ ಹೆಚ್. ಸಿದ್ದಲಿಂಗೇಶ್, ಹೆಚ್.ಕೆ. ಕುಮಾರಸ್ವಾಮಿ, ಬಾದಮಿಯ ಹನಮಂತಪ್ಪ ಮಾವಿನಮರದ, ಅಪ್ಪುಗೌಡ, ಶಾರದಾ ಅಪ್ಪಾಜಿಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ತುಪಲ್ಲಿ ಚೌಡರೆಡ್ಡಿ, ಸಿ.ವಿ. ಚಂದ್ರಶೇಖರ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯೆ ಇಂಚರಾ ಗೋವಿಂದರಾಜು,

ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಮನ್ ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರ, ಮೈಮುಲ್ ಮಾಜಿ ಅಧ್ಯಕ್ಷ ಪ್ರಸನ್ ಕುಮಾರ್, ಮುಖಂಡರಾದ ಎನ್.ಆರ್. ಸಂತೋಷ, ಸಿರಾ ಉಗ್ರೇಶ್, ಹಿರಿಯೂರು ರವೀಂದ್ರಪ್ಪ ಸೇರಿದಂತೆ ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು , ಭಕ್ತರು ಉಪಸ್ಥಿತರಿದ್ದರು.

 

Share This Article
error: Content is protected !!
";