ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಧರ್ಮಸ್ಥಳ ಚಲೋ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿರುವ ಪಕ್ಷದ ನಮ್ಮ ಶಾಸಕರು
, ಸಂಸದರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯವರ ದರ್ಶನ ಪಡೆದು ಪೂಜೆ ಸಲ್ಲಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ಕರ್ನಾಟಕ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿರುವ ಧರ್ಮಸ್ಥಳ ಚಲೋ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕಾರ್ಯಕರ್ತರು ಹಾಗೂ ಶ್ರೀ ಮಂಜುನಾಥ ಸ್ವಾಮಿಯವರ ಭಕ್ತರು ನಿರೀಕ್ಷೆ ಮೀರಿ ಧರ್ಮಸ್ಥಳದತ್ತ ಹರಿದು ಬರುತ್ತಿರುವುದು ಕಾರ್ಯಕ್ರಮದ ಯಶಸ್ಸಿನ ಮುನ್ಸೂಚನೆ ನೀಡಿದೆ ಎಂದು ವಿಜಯೇಂದ್ರ ಹೇಳಿದರು.

- Advertisement - 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾಗಿ ನಾರಾಯಣಸ್ವಾಮಿ, ಸಂಸದ ಕ್ಯಾಪ್ಟನ್ ಬ್ರಿಜೇಶ್, ಧರ್ಮಸ್ಥಳ ಚಲೋ ಕಾರ್ಯಕ್ರಮದ ರಾಜ್ಯ ಸಂಚಾಲಕ ಹಾಗೂ ಶಾಸಕ ಎಸ್. ಆರ್. ವಿಶ್ವನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಶಾಸಕರಾದ ಸುರೇಶ್ ಗೌಡ, ಮುನಿರತ್ನ, ಹರೀಶ್ ಪೂಂಜ ಸೇರಿದಂತೆ ಪಕ್ಷದ ಸಂಸದರು, ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

 

- Advertisement - 

 

 

Share This Article
error: Content is protected !!
";