ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಧರ್ಮಸ್ಥಳ ವಿಚಾರವಾಗಿ ಕಾಂಗ್ರೆಸ್‌ಸರ್ಕಾರ ನಡೆದುಕೊಂಡ ರೀತಿ ಸರಿಯಲ್ಲ. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅವಮಾನ, ಅಪಪ್ರಚಾರವಾಗುವಂತೆ ನಡೆದುಕೊಂಡಿರುವುದು ಕೋಟ್ಯಂತರ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಕೇಂದ್ರ ಬೃಹತ್‌ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ, ಷಡ್ಯಂತ್ರ ಹಾಗೂ ಸುಳ್ಳು ಆರೋಪಗಳ ವಿರುದ್ಧ ಜಾತ್ಯತೀತ ಜನತಾದಳ ವತಿಯಿಂದ “ಧರ್ಮಸ್ಥಳ ಸತ್ಯ ಯಾತ್ರೆ”ಯನ್ನು ಆಗಸ್ಟ್-31 ರಂದು ಭಾನುವಾರ ಬೆಳಿಗ್ಗೆ 7.30ಕ್ಕೆ ಹಾಸನದಿಂದ ಕೈಗೊಂಡಿದ್ದು ಕಾರ್ಯಕರ್ತರು,
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧರ್ಮ ರಕ್ಷಣೆಯ ಕಾರ್ಯದಲ್ಲಿ ಕೈಜೋಡಿಸುವಂತೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

