ಮಹಿಳೆಯರು ಹಾಗೂ ವಿಕಲ ಚೇತನರು ಮುಖ್ಯ ವಾಹಿನಿಗೆ ಬರಬೇಕು- ಧೀರಜ್ ಮುನಿರಾಜು

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮಹಿಳೆಯರು ಪ್ರತಿಭೆಯಲ್ಲಿ ಯಾರಿಗೂ ಕಡಿಮೆ ಇಲ್ಲ. ಆದರೆ ಅವರಿಗೆ
  ಅವಕಾಶಗಳು ಕಡಿಮೆ. ಈ ನಿಟ್ಟಿನಲ್ಲಿ  ಮಹಿಳೆಯರು ಹಾಗೂ ವಿಕಲ ಚೇತನರನ್ನು ಮುಖ್ಯ ವಾಹಿನಿಗೆ ತರಲು ಸ್ವಯಂಸೇವಾ ಸಂಸ್ಥೆಗಳ ಪಾತ್ರ  ಮಹತ್ವವಾಗಿದೆ ಎಂದು ಶಾಸಕ ದೀರಜ್ ಮುನಿರಾಜು ಹೇಳಿದರು. 

ನಗರದ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ ವತಿಯಿಂದ ನಗರದ ಟಿ.ಬಿ.ವೃತ್ತದ ಬಳಿಯಿರುವ ಸಂಸ್ಥೆಯ ಕಚೇರಿಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,ಮಹಿಳೆಯರಿಗೆ ವಿಶೇಷವಾಗಿ ಗ್ರಾಮೀಣ ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಬೇಕು. ಮಹಿಳೆಯರು ತರಬೇತಿಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.  

ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ಮಹಿಳಾ ಸಬಲೀಕರಣ, ಮಹಿಳಾ ಸಶಕ್ತೀಕರಣದ ಧ್ಯೇಯ ಹಾಗೂ ಲಿಂಗ ಅಸಮಾನತೆಯ ವಿರುದ್ದ ದನಿ ಎತ್ತುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಪ್ರಮುಖ ಪಾತ್ರ ವಹಿಸಲಿದೆ. ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಬರುತ್ತಿರುವುದು ಸಂತಸದ ಸಂಗತಿಯಾಗಿದ್ದುಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಮುದ್ದಣ್ಣ. ಎಂ ಮಾತನಾಡಿಸಮಾಜದಲ್ಲಿ ಲಿಂಗ ತಾರತಮ್ಯ ಹೆಚ್ಚಾಗುತ್ತಿದ್ದು ಈ ಬಗ್ಗೆ ಜಾಗೃತಿ ಮೂಡಬೇಕಿದೆ ಗಂಡು ಮಕ್ಕಳಿಗೆ ನೀಡಿದಷ್ಟೇ ಆದ್ಯತೆಯನ್ನು ಹೆಣ್ಣು ಮಕ್ಕಳಿಗೂ ನೀಡಿ ಸಮಾನತೆಯಿಂದ ನಡೆಸಿಕೊಳ್ಳಬೇಕು ಇಲಾಖೆಯಿಂದ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. 

 ಲೇಖಕಿ ಕೆ.ಎಸ್.ಪ್ರಭಾ ಮಾತನಾಡಿ, ಸಂವಿಧಾನದಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ಸಮಾನ ಹಕ್ಕುಗಳಿವೆ ಅಂತಯೇ ಮಹಿಳೆಯರಿಗೂ ಹಕ್ಕು ಬಾಧ್ಯತೆಗಳಿವೆ ಸಂವಿಧಾನ ಜಾರಿಯಾದ ಮೇಲೆ ಮಹಿಳೆಯರ ಬದುಕಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸಬಲರಾಗುತ್ತಿದ್ದಾರೆ  ಎಂದರು.

ಗ್ರಾಮೀಣ ಅಭಿವೃದ್ಧಿಯ ಸೇವಾ ಸಂಸ್ಥೆಯ ಸಂಸ್ಥಾಪಕ ಗೋಪಾಲ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಕಾರಿ ಎನ್. ಮುನಿರಾಜು, ಜೈನ ಆಸ್ಪತ್ರೆಯ ವೈದ್ಯ ಡಾ. ವಿನಯ್, ಸಿಡಿಪಿಓ ರವಿಕುಮಾರ್ ನಗರಸಭಾ ಸದಸ್ಯೆ ನಾಗರತ್ನ, ಗ್ರಾಮೀಣ ಅಭಿವೃದ್ಧಿಯ ಸೇವಾ ಸಂಸ್ಥೆಯ ಕಾರ್ಯದರ್ಶಿ ಅಮಲಿ ನಾಯಕ್ಭುವನೇಶ್ವರಿ ಸಹಕಾರ ಸಂಘದ ಅಧ್ಯಕ್ಷೆ ನಾಗಮಣಿ ಮೊದಲಾದವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ಮತ್ತು ಬ್ಯೂಟಿಷಿಯನ್ ಸಾಮಗ್ರಿಗಳನ್ನು ವಿತರಿಸಲಾಯಿತು.

- Advertisement -  - Advertisement - 
Share This Article
error: Content is protected !!
";