ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಎಪಿಎಂಸಿ ಯಾರ್ಡ್ ರಸ್ತೆಯ ಡಿಸಿಆರ್‍ಎಂ ಕಾಂಪ್ಲೆಕ್ಸ್‍ನ ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಇದೇ ಜ.13ರಂದು ಬೆಳಿಗ್ಗೆ 11ಕ್ಕೆ ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ ಹಮ್ಮಿಕೊಳ್ಳಲಾಗಿದೆ.
ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಎಸ್‍ಸಿಎಚ್‍ಐಎಲ್‍ಎಲ್ ಮೂಲಕ ಇ-ಸ್ಟ್ಯಾಂಪ್ ವಿತರಿಸುವ ಸಹಕಾರಿ ಸೌಹರ್ದಗಳ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಚಿತ್ರದುರ್ರ್ಗ ಹಿರಿಯ ಉಪ ನೋಂದಣಾಧಿಕಾರಿ ತಿಳಿಸಿದ್ದಾರೆ.

