ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ಕಾರ್ಮಿಕ ನಾಯಕರು, ನನಗೆ ಆತ್ಮೀಯರೂ ಆಗಿದ್ದ ಅನಂತ ಸುಬ್ಬರಾವ್ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಆರ್.ಅಶೋಕ್, ವಿಜಯೇಂದ್ರ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಐಟಿಯುಸಿ ಸಂಘಟನೆಯಲ್ಲಿ ಸುಮಾರು 5 ದಶಕಗಳ ಕಾಲ ಸಕ್ರಿಯರಾಗಿದ್ದ ಶ್ರೀ ಅನಂತ ಸುಬ್ಬರಾವ್ ಅವರು ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಂತರ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಸಂಘಟನೆಯನ್ನು ಕೆಳಮಟ್ಟದಿಂದ ಕಟ್ಟಿದ್ದರು. ಸುಮಾರು ಐದು ದಶಕಗಳ ಕಾಲ ಬೀದಿಯಿಂದ ಹಿಡಿದು ಸರ್ಕಾರದ ಉನ್ನತ ಮಟ್ಟದ ಸಂಧಾನ ಸಭೆಗಳವರೆಗೆ ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿದ ಬದ್ಧತೆಯುಳ್ಳ ನಾಯಕಾಗಿದ್ದರು ಎಂದು ಅವರುತಿಳಿಸಿದ್ದಾರೆ.
ನಾನು ಸಾರಿಗೆ ಸಚಿವನಾಗಿದ್ದ ಸಂದರ್ಭದಲ್ಲಿಯೂ ಸಹ ಹಲವಾರು ಬಾರಿ ಸಾರಿಗೆ ನೌಕರರ ಸಮಸ್ಯೆಗಳ ಸಂಧಾನ ಸಭೆಗಳಲ್ಲಿ ಅವರನ್ನು ಭೇಟಿಯಾಗುವ ಅವಕಾಶ ದೊರಕಿತ್ತು. ಕಾರ್ಮಿಕರ ಪರ ಅಚಲವಾದ ನಿಲುವು ಹೊಂದಿದ್ದರೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಹಕರಿಸಬೇಕು ಎಂದು ಮನವಿ ಮಾಡಿದಾಗ ಸಹಕರಿಸುತ್ತಿದ್ದರು.
2025ರ ಡಿಸೆಂಬರ್ನಲ್ಲಿ ವಯೋಸಹಜ ಕಾರಣಗಳಿಂದ ಎಐಟಿಯುಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರಾದರೂ, ತಮ್ಮ ಕಡೆಯ ಕ್ಷಣದವರೆಗೂ ಕಾರ್ಮಿಕರ ಪರವಾದ ಗಟ್ಟಿ ದನಿಯಾಗಿ ನಿಂತಿದ್ದೇ ಅವರ ಬದ್ಧತೆಯ ಬದುಕಿಗೆ ಸಾಕ್ಷಿ.
ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ, ಅಸಂಖ್ಯಾತ ಅಭಿಮಾನಿ ಬಳಗಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಗಣ್ಯರು ಪ್ರಾರ್ಥಿಸಿದ್ದಾರೆ.

