ಬಂಡೆಯೆಂದು ಬೀಗುತ್ತಿದ್ದ ಡಿಕೆಶಿ ಮುದ್ದೆಯಾಗಿದ್ದಾರೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ, ನಿಮ್ಮ ಪಕ್ಷದಲ್ಲಿ ನಿಮಗೆ ಎದುರಾಗಿರುವ ಕಂಟಕದಿಂದ ಪಾರಾಗಲು ಚಾಮುಂಡಿ ಬೆಟ್ಟ ಹಾಗೂ ಸಂಪ್ರದಾಯದ ದಸರೆಯನ್ನು ಬಳಸಿಕೊಳ್ಳಬೇಡಿ, ಬಂಡೆಯೆಂದು ಬೀಗುತ್ತಿದ್ದ ನೀವು ಈಗಾಗಲೇ ಮುದ್ದೆಯಾಗಿ ಹೋಗಿದ್ದೀರಿ

, ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಸಿದ್ದಾರೆ. 

- Advertisement - 

ಪೈಪೋಟಿಯ ಮೇಲೆ ನೀವೂ, ನಿಮ್ಮ ಕಾಂಗ್ರೆಸಿಗರು ಹಿಂದೂ ಧರ್ಮದ ಅವಹೇಳನ, ಹಿಂದೂ ಧಾರ್ಮಿಕ ಕೇಂದ್ರಗಳ ಅಪಪ್ರಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದೀರಿ,

ಇದೀಗ ಹಿಂದೂ ಪರಂಪರೆಯ ವಿಜಯ ದಶಮಿ ಹಬ್ಬವನ್ನು ಮಲಿನ ಮಾಡಲು ಹೊರಟಿದ್ದೀರಿ, ಮಹಿಷಾಸುರ ಮರ್ದಿನಿ ನಿಮ್ಮನ್ನು ಮರ್ದನ ಮಾಡುವ ಕಾಲ ದೂರವಿಲ್ಲ, “ಚಾಮುಂಡಿ ತಾಯಿ ಶ್ರದ್ಧೆಯ ಭಕ್ತರ ಸ್ವತ್ತು, ಅದನ್ನು ಮುಟ್ಟಲು ಹೋದರೆ ಕಾದಿದೆ ನಿಮಗೆ ಆಪತ್ತು ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.

- Advertisement - 

 

 

 

 

Share This Article
error: Content is protected !!
";