ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಗವಾಗಿ ಡಿಕೆಶಿ ಮನೆಗೆ ಸ್ಟಿಕ್ಕರ್ ಅಂಟಿಸಿದರು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿದ್ಯುತ್ ಸಂಪರ್ಕವಿರುವ ಮನೆಗಳ ಆರ್.ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಲಾಗುತ್ತಿದೆ. ಈ ಸಮೀಕ್ಷೆ ಕಾರ್ಯದಲ್ಲಿ ಮೊದಲನೇ ಅಂಗವಾಗಿ ಮನೆ ಪಟ್ಟಿ ಅಂದ್ರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದ್ದು, ಇದರ ಭಾಗವಾಗಿ ನನ್ನ ಸದಾಶಿವನಗರದ ನಿವಾಸಕ್ಕೆ ಆಯೋಗದ ಸಿಬ್ಬಂದಿ ಭೇಟಿ ನೀಡಿ, ಸ್ಟಿಕ್ಕರ್ ಅಂಟಿಸಿದರು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

- Advertisement - 

ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಮನೆಗೆ ಭೇಟಿ ನೀಡಿ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಈ ವೇಳೆ ಸರಿಯಾದ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿನಂತಿ ಮಾಡಿದರು.

 

- Advertisement - 

 

Share This Article
error: Content is protected !!
";