ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಗೆ ಆತ್ಮೀಯ ಸ್ವಾಗತಿಸಿದ ಸಚಿವ ದಿನೇಶ್ ಗುಂಡೂರಾವ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿಲಿ ಗಣರಾಜ್ಯದ ಅಧ್ಯಕ್ಷರಾದ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಶುಕ್ರವಾರ ಮಧ್ಯಾಹ್ನ 12,30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ.,

ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್. ಜಿ,  ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ .ಬಿ. ಬಸವರಾಜು ಸೇರಿದಂತೆ ಚಿಲಿ ಗಣರಾಜ್ಯದ ಅಧಿಕಾರಿಗಳು ಹಾಗೂ ಇತರೆ ಗಣ್ಯರು  ಉಪಸ್ಥಿತರಿದ್ದರು.

 

Share This Article
error: Content is protected !!
";