ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯಲ್ಲಿ ಜನವರಿ ಒಂದು 2026 ರಿಂದ ಪ್ರಾರಂಭವಾಗುವ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ರೆಗ್ಯುಲರ್ ಮತ್ತು ದೂರ ಶಿಕ್ಷಣದ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಉತ್ತೀರ್ಣರಾಗಿರಬೇಕು. ಪಿಯುಸಿ ಮೇಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು.
ಈ ತರಬೇತಿಯು ಸಹಕಾರ ಕ್ಷೇತ್ರದ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೂ ಮಾಹೆಯಾನ ಶಿಷ್ಯವೇತನ ನೀಡಲಾಗುವುದು.
ಅರ್ಜಿಯನ್ನು ಪಡೆಯುವ ವಿಳಾಸ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋರ್ಟಿ ಮ್ಯಾನೇಜ್ಮೆಂಟ್ ನಂಬರ್ 1/2, ಎರಡನೇ ಮಹಡಿ ಮೂರನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು –18 ಹೆಚ್ಚಿನ ಮಾಹಿತಿಗಾಗಿ 9449007661 ಹಾಗೂ 08035541407 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

