ಪಾಕಿಸ್ತಾನ ವಿರುದ್ಧ ಭಾರತಕ್ಕೆ ರಾಜತಾಂತ್ರಿಕ ಜಯ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ
BSF ಯೋಧ ಕೊನೆಗೂ ಬಿಡುಗಡೆಯಾಗುವ ಮೂಲಕ ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದೆ.

ಭಾರತ ಮತ್ತು ಪಾಕ್ ಗಡಿಯಲ್ಲಿ ಏಪ್ರಿಲ್ ತಿಂಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಬಂಧಿಸಿತ್ತು. ಈಗ ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು ಭಾರತದ ವಶಕ್ಕೆ ನೀಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ ಮೂಲಕ ಬೆಳಿಗ್ಗೆ 10.30ರ ಸುಮಾರಿಗೆ ಹಸ್ತಾಂತರಿಸಲಾಯಿತು ಎಂದು ಬಿಎಸ್ಎಫ್ ತಿಳಿಸಿದೆ.

2025ರ ಏಪ್ರಿಲ್-23 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಜವಾನ್ ಪಿಕೆ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರ ತಿಳಿಸಿದೆ.

ಫಿರೋಜ್‌ಪುರ ಸೆಕ್ಟರ್‌ನಲ್ಲಿ ಆಕಸ್ಮಿಕವಾಗಿ ಎಲ್ಒಸಿಯ ಶೂನ್ಯ ರೇಖೆಯನ್ನು ದಾಟಿದ ನಂತರ ಏಪ್ರಿಲ್ 23 ರಂದು ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು. ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರು ಸಾವನ್ನಪ್ಪಿದ ವಿನಾಶಕಾರಿ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಅವರನ್ನು ವಶಕ್ಕೆ ಪಡೆಯಲಾಗಿತ್ತು.

Share This Article
error: Content is protected !!
";