ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಕೆ.ಜಿ.ರಸ್ತೆ, ಬೆಂಗಳೂರು-09 ಇಲ್ಲಿ ನವೆಂಬರ್ 15ರ ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 4.00 ಗಂಟೆಯ ವರೆಗೆ ಅಮೆಜಾನ್ ಡಿಸ್ಟ್ರಿಬ್ಯೂಟರ್ ಮತ್ತು ಲಕ್ಷ್ಮಿ ಮೋಟಾರ್ಸ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರು “ನೇರ ಸಂದರ್ಶನ”ವನ್ನು ಆಯೋಜಿಸಿದ್ದು, ಸದರಿ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಪದವಿ, ವಿದ್ಯಾರ್ಹತೆ ಹೊಂದಿರುವ ಆಸಕ್ತರು ನೇರ ಸಂದರ್ಶದಲ್ಲಿ ಭಾಗವಹಿಸಬಹುದಾಗಿದ್ದು, ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7795739724/ 9880597333/ 9066346565 ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.