ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯಲ್ಲಿ ಮೇ.8 ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಖಾಸಗಿ ಕಂಪನಿಯಾದ ಬಿ.ಎಸ್.ಎಸ್,ಮೈಕ್ರೋ ಫೈನನ್ಸ್ ಲಿ.ಚಿಕ್ಕಮಗಳೂರು ತನ್ನಲ್ಲಿ ಖಾಲಿ ಇರುವ(ಟಿಸಿಒ ಮತು ಸಿಒ) ಹುದ್ದೆಗೆ ನೇರ ಸಂದರ್ಶನವನ್ನು ಏರ್ಪಡಿಸಿದ್ದಾರೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ೧೮ ರಿಂದ ೩೦ ವರ್ಷ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶವಿದ್ದು, ಅಭ್ಯರ್ಥಿಗಳು ಒಂದು ಸೆಟ್ ರೆಸ್ಯೂಮ್ನೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು (೦೮೨೬೨–೨೯೫೫೩೮/ ೯೯೪೫೧೯೮೫೦೦) ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದಾರೆ.