ಅ.25 ರಂದು ನೇರ ನೇಮಕಾತಿ ಸಂದರ್ಶನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ .25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

- Advertisement - 

ಸಂದರ್ಶನದಲ್ಲಿ ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.

- Advertisement - 

ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ರಸ್ತೆಯಲ್ಲಿನ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";