ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ, ಪಕ್ಷ ಸಂಘಟನೆ ಹಾಗೂ ಮುಂಬರುವ ತಾಲೂಕು & ಜಿಲ್ಲಾ ಪಂಚಾಯತಿ ಚುನಾವಣೆ ಸಿದ್ಧತೆಗಳ ಬಗ್ಗೆ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವೆಂಕಟರಾವ್‌ನಾಡಗೌಡ, ವಿಧಾನ ಪರಿಷತ್‌ಸದಸ್ಯರಾದ ಟಿ.ಎ. ಶರವಣ, ಜವರಾಯಿಗೌಡ, ಮಾಜಿ ಶಾಸಕರುಗಳಾದ ನಿಸರ್ಗ ನಾರಾಯಣಸ್ವಾಮಿ, ಶಿವಶಂಕರ್, ಸುರೇಶ್‌ಗೌಡ, ದೊಡ್ಡಪ್ಪಗೌಡ ಪಾಟೀಲ್‌ನರಿಬೋಳ್, ಕೆ. ಮಹದೇವ್, ಅಶ್ವಿನ್ಕುಮಾರ್, ವಿಧಾನ ಪರಿಷತ್‌ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ,
ಚೌಡರೆಡ್ಡಿ ತೂಪಲ್ಲಿ, ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ. ರಮೇಶ್‌ಗೌಡ, ಹಿರಿಯ ಮುಖಂಡರಾದ ಜಗದೀಶ್ನಾಗರಾಜಯ್ಯ, ತಿಮ್ಮೇಗೌಡ, ಭದ್ರೇಗೌಡ, ಗೊಟ್ಟಿಗೆರೆ ಮಂಜಣ್ಣ, ಅಶೋಕ್, ಗುಬ್ಬಿ ನಾಗರಾಜ್, ಹರಿಬಾಬು ಅವರು ಸೇರಿದಂತೆ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.