ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತಾಂಧರ ಅಡ್ಡೆಯಾಗಿರುವ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಿಡಿಗೇಡಿಗಳು ಬ್ಲೇಡ್‌ನಿಂದ ಗೋಮಾತೆಯ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಸಮಾಜಘಾತುಕರು ಚಾಮರಾಜಪೇಟೆಯ ವಿನಾಯಕ ನಗರದ ನಿವಾಸಿ ಕರ್ಣ ಎಂಬುವವರಿಗೆ ಸೇರಿದ 8 ಹಸುಗಳ ಪೈಕಿ 3 ಹಸುಗಳ ಕೆಚ್ಚಲು ಕೊಯ್ದಿದ್ದಾರೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ತೆರುವು ಮಾಡಲು ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಹೊಂಚು ಹಾಕಿ ಕೂತಿತ್ತು.
ಈ ಹಿನ್ನಲೆ ಆಸ್ಪತ್ರೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟಕ್ಕೆ ಹಸುಗಳ ಮಾಲೀಕರು ಸಿದ್ಧರಾಗಿದ್ದರು. ಇದರ ನಡುವೆ ಇಂಥ ಅಮಾನವೀಯ ಘಟನೆ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಬಿಜೆಪಿ ಅನುಮಾನ ವ್ಯಕ್ತಪಡಿಸಿದೆ.
ಮಿಸ್ಟರ್‌ಜಮೀರ್ ಅಹಮದ್ ಖಾನ್ ಅವರೇ, ನಿಮ್ಮದೇ ಕ್ಷೇತ್ರದಲ್ಲಿ ಸಮಾಜ ತಲೆತಗ್ಗಿಸುವ ಕೃತ್ಯ ನಡೆದಿದೆ. ನೀವು ಮಾತ್ರ ಕಾಣೆ ಆಗಿರುವುದು ಏಕೆ? ಎಂದು ಬಿಜೆಪಿ ವ್ಯಂಗ್ಯವಾಡಿದ್ದಾರೆ.