ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ ನ.19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿ. ಪಂ. ಸಭಾಂಗಣದಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ದಿಶಾ ಸಭೆಯನ್ನು ಆಯೋಜಿಸಲಾಗಿದೆ.
ಸಭೆಗೆ ಸಮಿತಿಯ ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಪ್ರಗತಿ ವರದಿಯ 60 ಪ್ರತಿ ಹಾಗೂ ಪಾಲನಾ ವರದಿಯ 40 ಪ್ರತಿಗಳನ್ನು ಲೀಗಲ್ ಸೈಜ್ ಲ್ಯಾಂಡ್ ಸ್ಕೇಪ್ನಲ್ಲಿ ಸಿದ್ದಪಡಿಸಿ ನ.14ರೊಳಗೆ ಅಭಿವೃದ್ಧಿ ಶಾಖೆಗೆ ಸಲ್ಲಿಸಬೇಕು.
ಸಭೆಯ ದಿನದಂದು ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಾಗುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.