ಉಚಿತ ಕಿವಿಯ ಶ್ರವಣ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ
, ಚಿತ್ರದುರ್ಗ, ಟೀಂ ಈಶ್ವರ್ ಮಲ್ಲೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ಕಾರ್ಯಕ್ರಮವನ್ನು ಜುಲೈ 27 ಬೆಳಿಗ್ಗೆ 11 ಗಂಟೆಗೆ ನಗರದ ಪತ್ರಕರ್ತರ ಭವನದ ಡಾ.ಬಿ.ಆರ್. ಅಂಬೇಡ್ಕ‌ರ್ ಸಭಾಂಗಣ ದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವವರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ ಅಧ್ಯಕ್ಷತೆ ವಹಿಸುವರು.

- Advertisement - 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಕಾ.ನಿ.ಪ. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ಯೋಗೇಶ, ಬೆಂಗಳೂರು ಶ್ರವಣ ತಜ್ಞರಾದ ಡಾ.ಪವನ್, ಉಡುಪಿ, ಈಶ್ವರ್ ಮಲ್ಪೆ ಟೀಂ, ಸಂಚಾಲಕರಾದ ಲವ ಲಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ಚಿತ್ರದುರ್ಗ ಪ್ರಕಟಣೆ ತಿಳಿಸಿದೆ.

 

- Advertisement - 

 

 

 

Share This Article
error: Content is protected !!
";