ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಪೆನ್ನು ವಿತರಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದ ಸ ಹಿ ಪ್ರಾ ಶಾಲೆಯಲ್ಲಿ ವಿಶಿಷ್ಟ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಲೆಯಲ್ಲಿ ಸಂಭ್ರಮ ಶನಿವಾರದ ಕಾರ್ಯಕ್ರಮದೊಂದಿಗೆ ವಿಶ್ವ ಕನ್ನಡ ಕಲಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಈ ರವೀಶ ಅಕ್ಕರ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಅವರ ಸ್ವಂತ ಹಣದಿಂದ ಬಹುಮಾನ ವಿತರಣೆ ಮಾಡಿದರು.
ಎಲ್ಲಾ ಮಕ್ಕಳಿಗೂ ಉಚಿತ ನೋಟ್ ಪುಸ್ತಕಗಳನ್ನು ಹಾಗೂ ಪೆನ್ನುಗಳನ್ನು ವಿತರಿಸಿದರು.ಶ್ವೇತಬಣ್ಣದ
38 ಮಕ್ಕಳಿಗೆ ಸಮವಸ್ತ್ರ ವಿತರಿಸಿದರು.

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದರ ಬಗ್ಗೆ ಮಾತನಾಡಿದರು.
ಕಾಡುಗೊಲ್ಲ ಸಂಘದ ಅಧ್ಯಕ್ಷ ದಾಸಪ್ಪ ಮಾತನಾಡಿ ಸರ್ಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಗುರಿಗಳ ಬಗ್ಗೆ ಮಕ್ಕಳಿಗೆ ತಿಳಿಸಿದರು.

- Advertisement - 

ಮೇಟೀಕುರ್ಕೆ ಶಾಲೆಯ ಮುಖ್ಯ ಶಿಕ್ಷಕ ಹುಸೇನ್ ಸಾಬ್ ಹೆಚ್, ಸಂಧ್ಯಾ ಡಿ., ಅತಿಥಿ ಶಿಕ್ಷಕರಾದ ಪವಿತ್ರ ಕೆ., ತನುಶ್ರೀ ಟಿ ಎಲ್ ಇವರು ಭಾಗವಹಿಸಿದ್ದರು.

 

- Advertisement - 

Share This Article
error: Content is protected !!
";