ಜಾಲಪ್ಪನವರ 99ನೇ ಜನ್ಮದಿನಾಚರಣೆ ಪ್ರಯುಕ್ತ ಕಂದಾಯ ಇಲಾಖೆಗೆ ಪರಿಕರಗಳ ವಿತರಣೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ದೇವರಾಜ ಅರಸ್‌ಎಜುಕೇಶನಲ್‌ಟ್ರಸ್ಟ್‌ ವತಿಯಿಂದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಮುತ್ಸದ್ದಿ ರಾಜಕಾರಣಿ ದಿವಂಗತ ಆರ್.ಎಲ್.ಜಾಲಪ್ಪ ಅವರ 99ನೇ ಜನ್ಮದಿನಾಚರಣೆ ಅಂಗವಾಗಿ ಸೇವಾ ಕಾರ್ಯದ ಭಾಗವಾಗಿ ತಾಲೂಕಿನ ಕಂದಾಯ ಇಲಾಖೆಗೆ ತಾಂತ್ರಿಕ ಪರಿಕರಗಳ ವಿತರಣೆ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು.

ಸುಮಾರು 4.5 ಲಕ್ಷ ವೆಚ್ಚದ ಕಂಪ್ಯೂಟರ್‌ಗಳು ಹಾಗೂ ಪ್ರಿಂಟರ್‌ಗಳನ್ನು ದೇವರಾಜ ಅರಸ್‌ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ. ರಾಜೇಂದ್ರ ಅವರು ತಹಶೀಲ್ದಾರ್‌ವಿಭಾವಿದ್ಯಾ ರಾಥೋಡ್‌ಅವರಿಗೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಅವರು, ಜಾಲಪ್ಪ ಅವರ ಸಾಮಾಜಿಕ ಕಾಳಜಿ ಮತ್ತು ದೂರದೃಷ್ಟಿಯ ಆಲೋಚನೆಗಳಿಗೆ ಪೂರಕವಾಗಿ ದೇವರಾಜ ಅರಸ್‌ಶಿಕ್ಷಣ ಸಂಸ್ಥೆ ಶೈಕ್ಷಣಿಕವಾಗಿ ಮಾತ್ರವಲ್ಲದೆ, ಜನಪರ ಆಲೋಚನೆಯನ್ನೂ ಅನುಷ್ಠಾನದ ಭಾಗವಾಗಿಸಿಕೊಂಡಿದೆ. ಅಧಿಕಾರಿಗಳ ಬೇಡಿಕೆಗೆ ಅನುಗುಣವಾಗಿ ಸಂಸ್ಥೆಯಿಂದ ಅಗತ್ಯ ನೆರವನ್ನು ಒದಗಿಸಲಾಗಿದೆ.

ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಕಚೇರಿ ಪಾಳ್ಯಕ್ಕೆ ಹೊಂದಿಕೊಂಡಂತೆ ಇರುವ ಸಾರ್ವಜನಿಕ ಶೌಚಾಲಯವನ್ನು ಪುನಶ್ಚೇತನಗೊಳಿಸಿ ಹೈಟೆಕ್‌ಶೌಚಾಲಯವಾಗಿ ಅಭಿವೃದ್ದಿ ಪಡಿಸಲು ನಮ್ಮ ಶಿಕ್ಷಣ ಸಂಸ್ಥೆಯಿಂದ ತೀರ್ಮಾನಿಸಲಾಗಿದ್ದು, ಶೀಘ್ರ ಕೆಲಸ ಆರಂಭಿಸಲಾಗುವುದು ಎಂದು ತಿಳಿಸಿದರು.

 ತಹಶೀಲ್ದಾರ್‌ವಿಭಾ ವಿದ್ಯಾರಾಥೋಡ್ ಮಾತನಾಡಿ, ತಾಂತ್ರಿಕ ಪರಿಕಗಳನ್ನು ಒದಗಿಸಿಕೊಡುವ ಮೂಲಕ ನೆರವು ಒದಗಿಸಿರುವುದು ಅಭಿನಂದನೀಯ. ಶೌಚಾಲಯ ಪುನರ್‌ನಿರ್ಮಾಣಕ್ಕೆ ಸಹಕಾರಿಸುವುದಾಗಿ ಭರವಸೆ ನೀಡಿರುವ ದೇವರಾಜ ಅರಸ್‌ಶಿಕ್ಷಣ ಸಂಸ್ಥೆಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.

ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ವಿಜಯ್‌ಕಾರ್ತಿಕ್, ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ, ಲಯನ್ಸ್‌ಕ್ಲಬ್‌ಆಫ್‌ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ನ ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಕಾರ್ಯದರ್ಶಿ ಕೆ.ಸಿ.ನಾಗರಾಜ್, ಕಂದಾಯ ಅಧಿಕಾರಿ ನರಸಿಂಹಯ್ಯ, ಸಿಬ್ಬಂದಿ ನರಸಿಂಹಮೂರ್ತಿ, ಕಾಲೇಜಿನ ತಾಂತ್ರಿಕ ವಿಭಾಗದ ಮಂಜುಳಾ, ಗಿರಿಭೂಷಣ್, ಮುಖೇಶ್, ರಮೇಶ್, ಮುಖಂಡ ಮುತ್ತಣ್ಣ ಮತ್ತಿತರರು ಉಪಸ್ಥಿತರಿದ್ದರು.

 

 

- Advertisement -  - Advertisement -  - Advertisement - 
Share This Article
error: Content is protected !!
";