ಚಂದ್ರವಳ್ಳಿ ನ್ಯೂಸ್, ಯಾದಗಿರಿ:
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್)ದ ಪಥಸಂಚಲನಕ್ಕೆ ಯಾದಗಿರಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗುರುಮಠಕಲ್ನಲ್ಲಿ ಅಕ್ಟೋಬರ್ 31ರಂದು ಆರ್ಎಸ್ಎಸ್ ಪಥಸಂಚಲನ ನಡೆಸಲು ಜಿಲ್ಲಾಡಳಿತದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಖರ್ಗೆ ಕೋಟೆಯಲ್ಲಿ ಆರ್ಎಸ್ಎಸ್ ಗಣವೇಷಧಾರಿಗಳು ಪಥಸಂಚಲನ ನಡೆಯಲಿದೆ.
ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರಿಂದ ಗುರು ಮಠಕಲ್ ಪಟ್ಟಣದ ನರೇಂದ್ರ ರಾಠೋಡ್ ಲೇಔಟ್ನಿಂದ ಪಥಸಂಚಲನ ಕೈಗೊಳ್ಳಲು ಅನುಮತಿ ನೀಡಿ ಆದೇಶ ಮಾಡಿದ್ದಾರೆ.
ಸಾಮ್ರಾಟ್ ವೃತ್ತ, ಬಸವೇಶ್ವರ ವೃತ್ತ , ಹನುಮಾನ್ ದೇವಸ್ಥಾನ ಹಾಗೂ ಕುಂಬಾರವಾಡಿ ಸೇರಿಹಲವೆಡೆ ಪಥಸಂಚಲನ ಸಂಚರಿಸಲಿದೆ.
ಜಿಲ್ಲಾಡಳಿತ ಹಾಕಿರುವ ಷರತ್ತುಗಳು:
ಯಾದಗಿರಿ ಜಿಲ್ಲಾಡಳಿತವು ಅನುಮತಿ ಕೊಟ್ಟಿರುವ ಆರ್ಎಸ್ಎಸ್ ಪಥಸಂಚಲನಕ್ಕೆ ಹತ್ತು ಷರತ್ತುಗಳನ್ನು ವಿಧಿಸಲಾಗಿದೆ.
ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವಷ್ಟೇ ಪಥಸಂಚಲನಕ್ಕೆ ಬಳಸುವುದು, ಜಾತಿ, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಘೋಷಣೆ ಕೂಗದಿರುವುದು ಹಾಗೂ ಮಾರಕಾಸ್ತ್ರ ಹಿಡಿದುಕೊಂಡು ಹೋಗುವುದನ್ನು ನಿಷೇಧಿಸಿ ಅನುಮತಿ ನೀಡಲಾಗಿದೆ.

