ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ಅಂಗವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಚಾಲಿತ ವಿಶ್ವದಲ್ಲಿ ಗಾಂಧೀ ತತ್ವ ಸಿದ್ಧಾಂತಗಳ ಮಹತ್ವದ ಬಗ್ಗೆ ವಿಶ್ಲೇಷಿಸಿ ಪ್ರಬಂಧವನ್ನು ಬರೆಯಲು ಅನುವಾಗುವಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಸ್ಪರ್ಧೆಗೆ ಪ್ರಬಂಧಗಳನ್ನು ಬರೆದು ಅಕ್ಟೋಬರ್ 31 ರೊಳಗಾಗಿ ಇ–ಮೇಲ್ ವಿಳಾಸ kstaessay.kannada@gmail.com & kstaessay.english@gmail.com ಮೂಲಕ ಕಳುಹಿಸಿಕೊಡುವುದು.
ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು 2024 ನೇ ನವೆಂಬರ್ 12 ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಮಹಾದ್ವಾರ ಪಕ್ಕ, ಜಿಕೆವಿಕೆ ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ದೊಡ್ಡ ಬೆಟ್ಟಹಳ್ಳಿ ಬಸ್ ನಿಲ್ದಾಣ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು– 560097 ಇಲ್ಲಿ ಆಯೋಜಿಸಲಾಗುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಸ್ಥಳದಲ್ಲೇ ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಪ್ರತ್ಯೇಕವಾಗಿ ಪ್ರಬಂಧವನ್ನು ಬರೆಯಬೇಕಾಗಿರುತ್ತದೆ.
ಹೆಚ್ಚಿನ ವಿವರಗಳಿಗೆ ಚಂದ್ರಶೇಖರಮೂರ್ತಿ ಎಸ್. ಮೊ.ಸಂ. 9686449019 / 9686919019 ಮತ್ತು ದೂ.ಸಂ. 080-29721550 ಅಥವಾ ಅಕಾಡೆಮಿಯ ವೆಬ್ ಸೈಟ್ www.kstacademy.in ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.