ಜಿಲ್ಲಾ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು  ಡಿಸೆಂಬರ್ 21 ರಿಂದ 23 ರವರೆಗೆ “ಮೌಲ್ಯ ವರ್ಧನೆ ಮತ್ತು ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಎಂಬ ಧ್ಯೇಯದೊಂದಿಗೆ ತೋಟಗಾರಿಕೆ ಮೇಳವನ್ನು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಿದೆ.

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಲ್ಲಿ, ಪ್ರತಿಯೊಂದು ಜಿಲ್ಲೆಗೆ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಒಬ್ಬ ಕೃಷಿಕರಿಗೆ, ಶ್ರೇಷ್ಠ ತೋಟಗಾರಿಕೆ ರೈತ / ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

- Advertisement - 

ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ರೈತ/ ರೈತ ಮಹಿಳೆಯರು ಅರ್ಜಿ ನಮೂನೆಯನ್ನು, ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು ಅಥವಾ

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವೆಬ್‍ಸೈಟ್ www.uhsbagalkot.karnataka.gov.in ಮೂಲಕ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆಯ ಮೂಲಕ 5ನೇ ನವೆಂಬರ್ 2025 ರ ಸಂಜೆ 5 ರೊಳಗಾಗಿ ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು – 560065 ಇವರಿಗೆ ಸಲ್ಲಿಸಬೇಕು.

- Advertisement - 

ಹೆಚ್ಚಿನ ಮಾಹಿತಿಗಾಗಿ ಡೀನ್, ಬೆಂಗಳೂರು ತೋಟಗಾರಿಕೆ ಮಹಾವಿದ್ಯಾಲಯ ಮೊಬೈಲ್ ಸಂಖ್ಯೆ 9480222488,   ಡಾ. ಬಿ. ಎಸ್. ಲಕ್ಷ್ಮಣ ರೆಡ್ಡಿ, ವಿಸ್ತರಣಾ ಮುಂದಾಳು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಬೆಂಗಳೂರು ಇವರ ಮೊಬೈಲ್ ಸಂಖ್ಯೆ 9900585242, ಅಥವಾ ಶುಲ್ಕ ರಹಿತ ಸಹಾಯವಾಣಿ 18004257910 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

Share This Article
error: Content is protected !!
";