ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜು. 31 ರೊಳಗಾಗಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವುದು.