ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ-ಜಿಲ್ಲಾಧಿಕಾರಿ ಟಿ.ವೆಂಕಟೇಶ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು ವಿಜೃಂಭಣೆಯಿಂದ ಹಾಗೂ ಅರ್ಥರ್ಪೂವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅದರನ್ವಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಸಂಬಂಧ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ ಪೂರ್ವಭಾವಿ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯೋತ್ಸವದ ಅಂಗವಾಗಿ ನವೆಂಬರ್ 01 ರಂದು ಬೆಳಿಗ್ಗೆ 7.30ಕ್ಕೆ ತಾಯಿ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆಯು ನಗರದ ನೀಲಕಂಠೇಶ್ವರ ದೇಗುಲದಿಂದ ಪ್ರಾರಂಭವಾಗಲಿದೆ.

ಈ ಬಾರಿಯ ಸ್ಥಬ್ದಚಿತ್ರ ಮೆರವಣಿಗೆ ಅರ್ಥಪೂರ್ಣವಾಗಿರಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ಸ್ಥಬ್ದಚಿತ್ರ ಸಮಿತಿ ಹೆಚ್ಚಿನ ಸಂಖ್ಯೆ ಸ್ಥಬ್ದಚಿತ್ರಗಳ ಬದಲಾಗಿ ಆಯ್ದ 10 ಇಲಾಖೆಗಳ ಅತ್ಯುತ್ತಮ ಸ್ಥಬ್ದಚಿತ್ರಗಳಿಗೆ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಸಮಿತಿ ಭಾಗವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಕಾರ್ಯ ನಡೆಸಬೇಕು. ಜಿಲ್ಲಾ ಪಂಚಾಯಿತಿ, ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಕೆ.ಎಸ್.ಆರ್.ಟಿ.ಸಿ ವತಿಯಿಂದ ಸರ್ಕಾರ ಸಾಧನೆಗಳನ್ನು ಸ್ತಬ್ಧಚಿತ್ರಗಳ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೆರವಣಿಗೆಯು ನಗರದ ನೀಲಕಂಠೇಶ್ವರ ದೇಗುಲದಿಂದ ಹೊರಟು, ಪ್ರಮುಖ ರಸ್ತೆ ಮೂಲಕ ರಾಜ್ಯೋತ್ಸವ ಸಮಾರಂಭ ಜರುಗುವ ಪೆÇಲೀಸ್ ಕವಾಯತು ಮೈದಾನದವರೆಗೆ ಸಾಗಿ ಬರಲಿದೆ. ಅಂದು ಬೆಳಿಗ್ಗೆ 9ಕ್ಕೆ ಪೆÇಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ನೆರವೇರಲಿದ್ದು ಶಿಷ್ಠಾಚಾರದ ಅನ್ವಯ ಎಲ್ಲ ಗಣ್ಯಮಾನ್ಯರನ್ನು ಆಹ್ವಾನಿಸಲಾಗುವುದು.

ಇದಕ್ಕಾಗಿ ಜಿಲ್ಲಾ ಪಂಚಾಯಿತಿ ಸಿಇಓ ಅಧ್ಯಕ್ಷತೆಯಲ್ಲಿ ವೇದಿಕೆ ಸಮಿತಿಯನ್ನು ರಚಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ನೇತೃತ್ವದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳ ಸಮಿತಿ ರಚನೆ ಮಾಡಲಾಗಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಬೆಳಿಗ್ಗೆ ಪೊಲೀಸ್ ಕವಾಯತು ಮೈದಾನದಲ್ಲಿ ಹಾಗೂ ಸಂಜೆ ತ.ರಾ.ಸು. ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸಭೆಯಲ್ಲಿ ಮಾಹಿತಿ ನೀಡಿದರು.

ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಕಲಾವಿದರಿಂದ  ನಮ್ಮ ನಾಡು, ನುಡಿ, ಸಂಸ್ಕøತಿ ಬಿಂಬಿಸುವ ಗೀತಗಾಯನ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.  

ಇದೇ ವೇಳೆ ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಲು ಅನುವಾಗುವಂತೆ ರಚಿಸಲಾಗಿರುವ ಸ್ವಾಗತ ಸಮಿತಿ, ಹಣಕಾಸು ಸಮಿತಿ, ಮೆರವಣಿಗೆ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಸಮಿತಿ ಸೇರಿದಂತೆ ವಿವಿಧ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.  

ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸನ್ಮಾನಕ್ಕಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಕ್ಷೇತ್ರವಾರು ಅವರ ಸಾಧನೆಯನ್ನು ಪರಿಶೀಲಿಸಬೇಕು, ಆಯ್ಕೆಯು ಪಾರದರ್ಶಕ ಹಾಗೂ ತಾರತಮ್ಯ ರಹಿತವಾಗಿರಬೇಕು, ಮಹಿಳೆಯರಿಗೂ ಪ್ರಾಧಾನ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ, ಆಹಾರ ಇಲಾಖೆ ಉಪನಿರ್ದೇಶಕ ಮಧುಸೂಧನ್, ನಗರಸಭೆ ಪೌರಾಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಸ್ವಾಮಿ, ರಂಗಕರ್ಮಿ ಕೆ.ಪಿ.ಎಂ.ಗಣೇಶಯ್ಯ, ನಿವೃತ್ತ ಪತ್ರಕರ್ತ ಟಿ.ಕೆ. ಬಸವರಾಜ್, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";