ಮಾನವ ಸರಪಳಿ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಮಹತ್ವ ಸಾರಲಾಗಿದೆ: ಜಿಲ್ಲಾಧಿಕಾರಿ ವೆಂಕಟೇಶ್

News Desk

ಮಾನವ ಸರಪಳಿ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವದ ಮಹತ್ವ ಸಾರಲಾಗಿದೆ: ಜಿಲ್ಲಾಧಿಕಾರಿ ವೆಂಕಟೇಶ್
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲೆಯಲ್ಲಿ ದಾಖಲೆಯ 145 ಕಿ.ಮೀ. ಉದ್ದದ ಮಾನವ ಸರಪಳಿ ಯಶಸ್ವಿಯಾಗಿ ನಿರ್ಮಿಸಿರುವುದಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು, ವಿವಿಧ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರೇತರ ಸಂಘ ಸಂಸ್ಥೆಗಳು, ವಿವಿಧ ಸಂಘಟನೆಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಜಗತ್ತಿಗೆ ಸಾರಲಾಗಿದೆ.

ಜನಪ್ರತಿನಿಧಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿದ್ದಾರೆ. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯಕ್ರಮ ರೂಪಿಸಿದ್ದಾರೆ.

ಪೊಲೀಸ್ ಇಲಾಖೆ ಸೂಕ್ತ ರಕ್ಷಣೆ ಹಾಗೂ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದೆ. ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಾರಿಗೆ ಇಲಾಖೆ ಸೇರಿದಂತೆ, ಕಾರ್ಯಕ್ರಮ ವರದಿಯನ್ನು ಎಲ್ಲಡೆ ವ್ಯಾಪಕವಾಗಿ ಬಿತ್ತರಿಸಿದ ಮಾಧ್ಯಮ ಮಿತ್ರರಿಗೂ ವೈಯಕ್ತಿಕವಾಗಿ ಧನ್ಯವಾದ ತಿಳಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದ್ದಾರೆ.

- Advertisement -  - Advertisement - 
Share This Article
error: Content is protected !!
";