ಚಿತ್ರದುರ್ಗ ಜಿಲ್ಲೆಯಲ್ಲಿ 1.20 ಲಕ್ಷ  ಜನರಿಂದ ಮಾನವ ಸರಪಳಿ- ಜಿಲ್ಲಾಧಿಕಾರಿ ವೆಂಕಟೇಶ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 145 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಸುಮಾರು 1.20 ಲಕ್ಷ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚಿಸುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಆಗಮಿಸಿದಾಗ ಕಾರ್ಯಕ್ರಮ ಅರ್ಥಪೂರ್ಣವಾಗಲಿದೆ.   ನಿಟ್ಟಿನಲ್ಲಿ ಶಾಲಾಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಕರು, ಸಂಘಸಂಸ್ಥೆಗಳ ಸದಸ್ಯರು,  ಜನಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಕಡ್ಡಾಯವಾಗಿ ಸರ್ಕಾರಿ ಅಧಿಕಾರಿಗಳು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯ ಗಡಿಭಾಗ ಮೊಳಕಾಲ್ಮುರು ತಾಲ್ಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯವರೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 145 ಕಿ.ಮೀ ದೂರದವರೆಗೆ ಮಾನವ ಸರಪಳಿ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಸುಮಾರು 1.20 ಲಕ್ಷ ಜನರು ಭಾಗವಹಿಸಲಿದ್ದಾರೆ.

  ಕುರಿತು ಕಳೆದ ವಾರದಿಂದಲೂ ಎಲ್ಲ ತಾಲ್ಲೂಕುಗಳಲ್ಲಿಯೂ ನಿರಂತರವಾಗಿ ಸಭೆಗಳನ್ನು ನಡೆಸಿ, ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕುಗಳಲ್ಲಿ ಮಾನವ ಸರಪಳಿ ನಿರ್ಮಿಸಲಾಗುತ್ತಿದ್ದು, ಉಳಿದ ಮೂರು ತಾಲ್ಲೂಕುಗಳಾದ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಸೆ.15ರಂದು ಬೆಳಿಗ್ಗೆ 9.30 ರಿಂದ 10.30 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮವೂ ನಡೆಯಲಿದೆ. ರಾಜ್ಯಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮ ನಡೆಯುವುದರಿಂದ ಮಾನವ ಸರಪಳಿ ಕಾರ್ಯಕ್ರಮ ಗಿನ್ನೆಸ್ ದಾಖಲೆಯಾಗಲಿದೆ. ಹಾಗಾಗಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಕರ್ಷಕವಾಗಿ ಹಾಗೂ ವಿಶೇಷ ಕಾಳಜಿ ವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕರ್ನಾಟಕ ಉತ್ತರ ತುದಿಯಿಂದ ದಕ್ಷಿಣ ತುದಿಯವರೆಗೆ ಅಂದರೆ ಬೀದರ್ನಿಂದ ಚಾಮರಾಜನಗರ ವರೆಗೆ, ಸುಮಾರು 25 ಲಕ್ಷ ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲು ಸರ್ಕಾರ ನಿರ್ಧರಿಸಿದೆ. ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನ ಪೀಠಿಕೆಯ ಭಾಗ. ಪ್ರಜಾಪ್ರಭುತ್ವದ ಅಂಶಗಳನ್ನು ಪ್ರತಿಯೊಬ್ಬರಿಗೂ ಮುಟ್ಟಿಸುವ ಕಾಳಜಿಯಿಂದ ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಪ್ರಜಾಪ್ರಭುತ್ವ ಮೌಲ್ಯ ಗೌರವಿಸುವಂತಹ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.  

ಸಭೆಯಲ್ಲಿ ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ನಾಯಕನಹಟ್ಟಿ .ಪಂ. ಅಧ್ಯಕ್ಷೆ ಮಂಜುಳಾ ಶ್ರೀಕಾಂತ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ವಿವಿಧ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ನಗರಸಭೆ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಇದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";