ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಇದೇ ಸೆ.11 ಮತ್ತು 12ರಂದು ಚಿತ್ರದುರ್ಗ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಆಯೋಜಿಸಲಾಗಿದ್ದು, ಸೆ.11ರಂದು ಬೆಳಿಗ್ಗೆ 10ಕ್ಕೆ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅಧ್ಯಕ್ಷತೆ ಹಾಗೂ ಧ್ವಜಾರೋಹಣ ನೆರವೇರಿಸುವರು.
ಸಂಸದ ಗೋವಿಂದ ಎಂ ಕಾರಜೋಳ ಘನ ಉಪಸ್ಥಿತಿ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಡಾ.ಎಂ.ಚAದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಆರ್.ಪುಟ್ಟಸ್ವಾಮಿ, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಆರ್.ಮಂಜುನಾಥ್, ಎನ್.ನರಸಿಂಹಮೂರ್ತಿ, ಬಿ.ಆರ್.ಶಿವಕುಮಾರ್, ಮಹೇಶ್ ಬಾಬು, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಎಸ್.ದೇವೇಂದ್ರಪ್ಪ, ಉಪನ್ಯಾಸಕ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಿಗಿ, ಕ್ರೀಡಾ ಸಂಚಾಲಕ ಎ.ಎಸ್.ರಂಗಪ್ಪ ಸೇರಿದಂತೆ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್.ಬಿ.ನರಸಿಂಹಮೂರ್ತಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸುವರು.
ಸೆ.11ರಂದು ಬೆಳಿಗ್ಗೆ 10 ಗಂಟೆಗೆ ಬಾಲಕ, ಬಾಲಕಿಯರ ಗುಂಪು ಆಟಗಳು ಪ್ರಾರಂಭವಾಗಲಿವೆ. ಸೆ.12ರಂದು ಬೆಳಿಗ್ಗೆ 6 ಗಂಟೆಗೆ ಬಾಲಕ, ಬಾಲಕಿಯರ ಗುಡ್ಡಗಾಡು ಓಟ ಹಾಗೂ ಬೆಳಿಗ್ಗೆ 9ಕ್ಕೆ ಅಥ್ಲೆಟಿಕ್ಸ್ ಕ್ರೀಡೆಗಳು ಪ್ರಾಂಭವಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.