ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಬಾಶೆಟ್ಟಿಹಳ್ಳಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು, ಸೆಕ್ಷನ್ 4 ರ ಅಡಿಯಲ್ಲಿ 10 ಪ್ರಕರಣಗಳನ್ನು ದಾಖಲಿಸಿ 1500 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ.

   ಈ ಸಂದರ್ಭದಲ್ಲಿ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಂಜುವಾಣಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶರಣಮ್ಮ ಅಡಿಹಾಳ್ ಹಾಗೂ ಕೀರ್ತಿ, ಸಮಾಜ ಸೇವಕರಾದ ವೆಂಕಟೇಶ್ ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";