ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಇದೇ ಫೆ.06ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 7.30ಕ್ಕೆ ಬೆಂಗಳೂರಿನಿಂದ ಹೊರಟು, 10.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಿತ್ರದುರ್ಗ ಜಿಲ್ಲೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ನಂತರ ಮಧ್ಯಾಹ್ನ 12.30ಕ್ಕೆ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಕಂದಾಯ ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

