ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಅವರು ಇದೇ ಅಕ್ಟೋಬರ್ 18ರಂದು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರು ಅಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಪಕ್ಷದ ಕಚೇರಿಗೆ ಭೇಟಿ ನೀಡಿ, ನಂತರ ಭೋವಿ ಗುರುಪೀಠದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಅಧ್ಯಕ್ಷರಿಗೆ ನಿಗಮದ ಯೋಜನೆ ಕುರಿತು ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಬಹುದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

