ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಮಹಾಸಭೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಶ್ರೀನಿವಾಸ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 22  ಶುಕ್ರವಾರ ಬೆಳಿಗ್ಗೆ 10:00ಗಂಟೆಗೆ ದೊಡ್ಡಬಳ್ಳಾರಪುರ ತಾಲ್ಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯದ ಎ.ಎಸ್.ವಿ.ಎನ್.ವಿ ಸಮುದಾಯ ಭವನದಲ್ಲಿ ಸಂಘದ 2023-24 ಮತ್ತು 2024-25ನೇ ಸಾಲಿನ ಸರ್ವಸದಸ್ಯರ ಮಹಾಸಭೆ ಮತ್ತು ದೊಡ್ಡಬಳ್ಳಾಪುರ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪತ್ರಿಕ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಜಿ. ಶ್ರೀನಿವಾಸ ರವರ ಅಧ್ಯಕ್ಷತೆಯಲ್ಲಿ, ಹಾಗೂ ಆಹಾರ ನಾಗರೀಕ ಸರಬರಾಜು ಇಲಾಖೆಯ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರ ಘನ ಉಪಸ್ಥಿತಿ  ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ರವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

- Advertisement - 

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ  ರಾಷ್ಟ್ರೀಯಾಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜಿ .ಸಿ ಲೋಕೇಶ್ ,ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ , ಹಾಲು ಒಕ್ಕೂಟದ ನಿರ್ದೇಶಕ ಹರೀಶ್ ಗೌಡ , ರಾಜ್ಯ ಕಾರ್ಯಕಾರಣಿ ಸಮಿತಿ ಅಧ್ಯಕ್ಷ ಸಿ.ಪಿ.ಕುಸುಮಾ ಪರ್ವತರಾಜ್,

ಶ್ರೀ ಘಾಟಿ ಸುಕ್ಷೇತ್ರ ಅಭಿವೃದ್ಧಿ ಕಾರ್ಯದರ್ಶಿ ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್, ದೊಡ್ಡಬಳ್ಳಾಪುರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ್ ಡಿ.ಉಪ್ಪಾರ್ , ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ನೆಲಗುದಿ, ಕಾರ್ಯಕ್ರಮದ ಪ್ರಾಸ್ತವಿಕ ನುಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಅರ್. ರಮೇಶ್ ನಡೆಸಿಕೊಳ್ಳಲಿದ್ದಾರೆ.

- Advertisement - 

 ವಿಶೇಷ ಆಹ್ವಾನಿತರಾಗಿ ಹಲವಾರು ಗಣ್ಯರು ಭಾಗವಹಿಸಲಿದದ್ದಾರೆ. ಮುಖ್ಯವಾಗಿ ಜಿಲ್ಲೆಯ ಸಂಘದ ಸರ್ವಸದಸ್ಯರುಗಳು ಮಹಾಸಭೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ ಜಿಲ್ಲಾಧ್ಯಕ್ಷರು ಮಾಡಿದ್ದಾರೆ.

 

 

 

Share This Article
error: Content is protected !!
";