ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
‘ಒಂದು ದೇಶ ಒಂದು ಚುನಾವಣೆ‘ ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾಗಿದ್ದು, ನಮ್ಮ ರಾಷ್ಟ್ರೀಯ ನಾಯಕರು ಈಗಾಗಲೇ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಒಂದ ದೇಶ, ಒಂದು ಚುನಾವಣೆ ಎನ್ನುವುದು ಸಣ್ಣ-ಪುಟ್ಟ ಪಕ್ಷಗಳನ್ನು ಮುಗಿಸುವ ಹುನ್ನಾರ. INDIA ಒಕ್ಕೂಟಕ್ಕೆ TCM, DMK, SP, ಎಡಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳ ಬೆಂಬಲ ಹೆಚ್ಚಾಗುತ್ತಿದ್ದು, ಇದನ್ನು ಮುಗಿಸಲು ಹೊರಟಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.