ಬಫರ್‌ ರಸ್ತೆಗಳ ಕಾಮಗಾರಿ ಪರಿಶೀಲಿಸಿದ ಡಿಕೆ ಶಿವಕುಮಾರ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋರಮಂಗಲದಿಂದ ಸರ್ಜಾಪುರಕ್ಕೆ ಸಂಪರ್ಕ ಕಲ್ಪಿಸುವ ಬಫರ್ ರಸ್ತೆಯ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದರು.

ಪ್ರಮುಖ ರಸ್ತೆಗಳ ಟ್ರಾಫಿಕ್‌ಕಡಿಮೆ ಮಾಡುವ ಸಲುವಾಗಿ ಬಫರ್‌ರಸ್ತೆಗಳನ್ನು ನಿರ್ಮಿಸಲಾಗುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ವಾಹನ ಸಂಚಾರ ಸುಲಭವಾಗಲಿದೆ ಎಂದು ಅವರು ತಿಳಿಸಿದರು.  

- Advertisement - 

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜಕಾಲುವೆಗಳ ಬಫರ್ ವಲಯದಲ್ಲಿ ಸಂಚಾರಯುಕ್ತ ಯೋಜನೆಅಡಿ 300 ಕಿ.ಮೀ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

ರಕ್ಷಣಾ ಸಚಿವರಾದ ರಾಜನಾಥ್‌ಸಿಂಗ್‌ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಕ್ಕಾಗಿ ಸೇನೆಯವರು ನಮಗೆ ಜಾಗ ಬಿಟ್ಟುಕೊಟ್ಟಿದ್ದಾರೆ. ಎಂ.ಜಿ ರಸ್ತೆಯಿಂದ ಬೆಳ್ಳಂದೂರುವರೆಗೂ ಹೊಸ ರಸ್ತೆ ನಿರ್ಮಾಣವಾಗಲಿದೆ. ಬಫರ್ ವಲಯದ ರಸ್ತೆಯಲ್ಲಿ ಸಂಚರಿಸುವುದರಿಂದಾಗಿ ನಾಗರಿಕರಿಗೆ ಸುಮಾರು 10 ಕಿ.ಮೀ ಪ್ರಯಾಣ ಕಡಿಮೆ ಆಗುತ್ತದೆ. 

- Advertisement - 

ನಮ್ಮ ಬೆಂಗಳೂರಿನ ಸಂಚಾರ ಸಮಸ್ಯೆಯನ್ನು ನಿಯಂತ್ರಣ ಮಾಡಲು ವಿಶೇಷವಾದ ಯೋಜನೆ ರೂಪಿಸಲಾಗುವುದು ಎಂದು ಡಿಸಿಎಂ ಭರವಸೆ ನೀಡಿದರು.

 

Share This Article
error: Content is protected !!
";