ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿಯಲಿದ್ದಾರೆ ಎಂದು ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರಿಗೆ ಅಧಿವೇಶನ ಮುಗಿದ ನಂತರ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ. ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ, ಸೌಹಾರ್ದಯುತ ಭೋಜನಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಶಿಸ್ತಿನ ಪಕ್ಷ, ನಂಬರ್ ಗೇಮ್‌ಗಳಿಗೆ ಪಕ್ಷದಲ್ಲಿ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ, ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದು ಇಕ್ಬಾಲ್ ಹೇಳಿದ್ದಾರೆ.

