ಚಂದ್ರವಳ್ಳಿ ನ್ಯೂಸ್, ರಾಮನಗರ:
ರಾಜ್ಯದ ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗುವುದು ಶೇ.200 ರಷ್ಟು ಸತ್ಯ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮುಂದಿನ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ರಚಿಸುತ್ತದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಶಾಸಕ ಹುಸೇನ್ ಹೇಳಿಕೆಯನ್ನು ಪ್ರಶ್ನಿಸಿ, ಮುಂದಿನ ಬಾರಿ ಅಂದ್ರೆ ಏನು ಅರ್ಥ? ಸಿದ್ದರಾಮಯ್ಯ ಈಗ ಹಾಲಿ ಸಿಎಂ ಆಗಿದ್ದಾರೆ. ಹೈಕಮಾಂಡ್ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಯಾರಿಗೂ ಗೊತ್ತಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಡಿಕೆ ಶಿವಕುಮಾರ್ ಸಾಕಷ್ಟು ಕೊಡುಗೆ ನೀಡಿದ್ದಾರೆ. ಸಿದ್ದರಾಮಯ್ಯ ಕೂಡಾ ಪಕ್ಷದ ಬೆಳವಣಿಗೆಯಲ್ಲಿ ಅಪಾರ ಶ್ರಮಿಸಿದ್ದಾರೆ ಎಂದರು. ಇಂತಹವರೇ ಸಿಎಂ ಆಗ್ತಾರೆ ಅಂತಾ ನಿರ್ಧರಿಸುವುದು ಇಕ್ಬಾಲ್ ಹುಸೇನ್ ಗೆ ಆಗಲೀ ಅಥವಾ ನನ್ನಗಾಗಲಿ ಇಲ್ಲ ಎಂದರು.
ಮುಂದಿನ ಸಿಎಂ ಯಾರಾಗ್ತಾರೆ ಎಂಬುದನ್ನು ಹೈಕಮಾಂಡ್ ನಿರ್ಧರಿಸಿದೆ. ಕೋಮುಶಕ್ತಿಗಳನ್ನು ಸೋಲಿಸಿ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ನಾಗರಾಜ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದರು.

