ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಮಾಜಿ ಸಚಿವ ಕೆಎನ್ ರಾಜಣ್ಣ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಖಾರವಾಗಿ ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ರಾಹುಲ್ ಗಾಂಧಿಗೆ ರಾಜಣ್ಣ ಸರಣಿ ಪತ್ರ ಬರೆದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಅಧ್ಯಕ್ಷರು ಸರಿಯಾಗಿ ಆಯ್ಕೆ ಮಾಡಿದ್ದರೆ
ವಿಧಾನಸಭೆ ಚುನಾವಣೆಯಲ್ಲಿ ಇನ್ನೂ 12-13 ಸ್ಥಾನಗಳನ್ನು ಹೆಚ್ಚು ಗೆಲ್ಲಬಹುದಿತ್ತು ಎಂದು ಹೈಕಮಾಂಡ್ಗೆ ಬರೆದ ಪತ್ರದಲ್ಲಿ ರಾಜಣ್ಣ ಉಲ್ಲೇಖಿಸಿದ್ದಾರಲ್ಲಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ನನಗೆ ಅನುಭವ ಕಡಿಮೆ ಇದೆ. ತರಬೇತಿ ಪಡೆದುಕೊಂಡು ಬರುತ್ತೇನೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ರಾಜಣ್ಣ ಅವರನ್ನು ಮಾಡಿದ್ದು ಮಾಜಿ ಸಿಎಂ ಎಸ್ಎಂ ಕೃಷ್ಣ ಎಂಬ ಬಗ್ಗೆ ಪ್ರತಿಕ್ರಿಯಿಸಿ, ಬಹಳ ಸಂತೋಷ. ಕೃಷ್ಣ ಅವರು ಈಗ ಇಲ್ಲವಲ್ಲ, ದೇವರಲ್ಲಿ ಕೇಳಿಕೊಂಡು ಬರಬೇಕಷ್ಟೇ ಎಂದು ವ್ಯಂಗ್ಯವಾಡಿದರು.

