ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಅವರು ದಿಢೀರ್‌ಬೆಳವಣಿಗೆಯೊಂದರಲ್ಲಿ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಇಬ್ಬರು ಶಾಸಕರೊಂದಿಗೆ ಚರ್ಚಿಸಿದ್ದಾರೆ.
ಧಾರವಾಡದ ಶಾಸಕ ವಿನಯ್‌ಕುಲಕರ್ಣಿ ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಭೇಟಿ ಮಾಡಿದ್ದಾರೆ.
ಕೊಲೆ ಪ್ರಕರಣ ಒಂದರಲ್ಲಿ ಜೈಲು ಸೇರಿರುವ ವಿನಯ್‌ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಲ್ಲಿರುವ ವೀರೇಂದ್ರ ಪಪ್ಪಿ ಈ ಇಬ್ಬರು ಕಾಂಗ್ರೆಸ್‌ಶಾಸಕರನ್ನು ಭೇಟಿ ಮಾಡಿದ್ದಾರೆ.

