ಸಿದ್ದು ಸ್ವಾಭಿಮಾನಿ ಸಮಾವೇಶದ ಬದಲು ಡಿಕೆಶಿಯ ಜನ ಕಲ್ಯಾಣ ಸಮಾವೇಶ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಎಂ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶ ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜನಕಲ್ಯಾಣ ಸಮಾವೇಶ ಆಯ್ತು! ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವೆ ಅದೇನು ಒಪ್ಪಂದಆಗಿದೆಯೋ, ಒಪ್ಪಂದಕಾರ್ಯಗತ ಆಗೋಲ್ಲ ಅನ್ನೋ ಅನುಮಾನ ಡಿ.ಕೆ.ಶಿವಕುಮಾರ್ ಅವರಿಗೆ ಯಾಕೆ ಕಾಡುತ್ತಿದೆಯೋ ಗೊತ್ತಿಲ್ಲ, ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ದೊಡ್ಡ ರಾಜಕೀಯ ಸ್ಫೋಟವಾಗುವ ಎಲ್ಲ ಲಕ್ಷಣಗಳಂತೂ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

ಸ್ವಾಮಿ ಡಿ.ಕೆ ಶಿವಕುಮಾರ್ ಅವರೇ, ತಾವು ಚಸ್ ಆದರೂ ಆಡಿ, ಫುಟ್ಬಾಲ್ ಆದರೂ ಆಡಿ, ಆದರೆ ನಿಮ್ಮ ರಾಜಕೀಯ ಮೇಲಾಟದಲ್ಲಿ ಕನ್ನಡಿಗರ ಬದುಕಿನ ಜೊತೆ ಮಾತ್ರ ಚೆಲ್ಲಾಟವಾಡಬೇಡಿ ಎಂದು ಅವರು ತಾಕೀತು ಮಾಡಿದ್ದಾರೆ.

ತಮ್ಮ ಲಾಯಲ್ಟಿಗೆ ತಮ್ಮ ಹೈಕಮಾಂಡ್ ರಾಯಲ್ಟಿ ಕೊಡುತ್ತೋ ಬಿಡುತ್ತೋ ಅದು ನಿಮ್ಮ ಪಕ್ಷದ ಆಂತರಿಕ ವಿಚಾರ, ಆದರೆ ಕಾಂಗ್ರೆಸ್ ಪಕ್ಷಕ್ಕೆ ಲಾಯಲ್ ಆಗಿ ಮತ ನೀಡಿ ಅಧಿಕಾರ ಕೊಟ್ಟಿರುವ ಕರ್ನಾಟಕದ ಮಾತಾದರರಿಗೆ ಅಭಿವೃದ್ಧಿಯ ರಾಯಲ್ಟಿ ಕೊಟ್ಟು ಕನ್ನಡಿಗರ ಋಣ ತೀರಿಸಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.

ನೀವು ವ್ಯಕ್ತಿ ಪೂಜೆ ಆದರೂ ಮಾಡಿ, ಪಕ್ಷ ಪೂಜೆ ಆದರೂ ಮಾಡಿ, ಆದರೆ ಕಾಂಗ್ರೆಸ್ ಪಕ್ಷವನ್ನು ನಂಬಿ ಅಧಿಕಾರ ಕೊಟ್ಟಿರುವ ಮತದಾರ ಪ್ರಭುಗಳಿಗೆ ದ್ರೋಹ ಬಗೆಯಬೇಡಿ ಎಂದು ಬಿಜೆಪಿ ನಾಯಕ ಅಶೋಕ್ ಕಿವಿ ಮಾತು ಹೇಳಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";