ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬ್ಯಾಂಕಿಂಗ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆ ಮಾಡುವ ಸಲುವಾಗಿ ಇದೇ ಜೂನ್ 27 ಶುಕ್ರವಾರ ಬೆಳಿಗ್ಗೆ 11.30ಕ್ಕೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಹಂತದ ಪುನರ್ ಪರಿಶೀಲನಾ ಸಮಿತಿ (ಡಿ.ಎಲ್.ಆರ್.ಸಿ) ಹಾಗೂ ಜಿಲ್ಲಾ ಸಲಹಾ ಸಮಿತಿ (ಡಿಸಿಸಿ)ಗಳ 2025-26ನೇ ಸಾಲಿನ ಮೊದಲ ತ್ರೈಮಾಸಿಕ ಸಭೆಯನ್ನು ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಸಿಇಓ ಎಸ್.ಜೆ.ಸೋಮಶೇಖರ್ ಸಭೆಯ ಅಧ್ಯಕ್ಷತೆ ವಹಿಸುವರು. ಸಂಸದ ಗೋವಿಂದ ಎಂ ಕಾರಜೋಳ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಸಂಬಂಧಪಟ್ಟ ಎಲ್ಲಾ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇಂದ್ರ ತಿಳಿಸಿದ್ದಾರೆ.