ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಇದೇ ಸೆ.18 ರಂದು ಬೆಳಿಗ್ಗೆ 11 ಗಂಟಗೆ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್ ಅಧ್ಯಕ್ಷ್ಯತೆಯಲ್ಲಿ ಲೀಡ್ ಬ್ಯಾಂಕ್‌ಗೆ ಸಂಬಂಧಿಸಿದಂತೆ ಡಿ.ಎಲ್.ಆರ್.ಸಿ (ಜಿಲ್ಲಾ ಮಟ್ಟದ ಸಲಹಾ ಮತ್ತು ಪರಿಶೀಲನಾ) ಮತ್ತು ಡಿ.ಸಿ.ಸಿ ಸಭೆ ನಡೆಯಲಿದೆ.
ವಿಶೇಷ ಆಹ್ವಾನಿತರಾಗಿ ಸಂಸದ ಗೋವಿಂದ ಎಂ ಕಾರಜೋಳ ಭಾಗವಹಿಸುವರು. ಈ ಸಭೆಗೆ ಸಮಿತಿ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಭಾಗವಹಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.