ನಾಯಕ ನಟ ಅರ್ಜುನ್ ಸರ್ಜಾ ಅವರಿಗೆ ಡಾಕ್ಟರೇಟ್ ಪ್ರಶಸ್ತಿ ಪ್ರದಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಾಯಕ ನಟರಾದ ಅರ್ಜುನ್ ಸರ್ಜಾ ಅವರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಿರುವ ಡಾ.ಎಂಜಿಆರ್ ಎಜುಕೇಷನ್ ರಿಸರ್ಚ್ ಇನ್ಸ್ಟಿಟ್ಯೂಟ್ ಸರ್ವಿಸ್.

ಅರ್ಜುನ್ ಸರ್ಜಾ ಅವರು ಕರ್ನಾಟಕದ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಜಕ್ಕೇನಳ್ಳಿ ಗ್ರಾಮದವರು. ಇವರ ತಂದೆ ದಿವಂಗತ ಶಕ್ತಿಪಸ್ರಾದ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡು ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರಗಳಲ್ಲಿ ಹಾಗೂ ಖಳನಟನಾಗಿ ಅಭಿನಯಿಸಿ ದೊಡ್ಡ ಪ್ರಮಾಣದಲ್ಲಿ ಯಶಸ್ಸು ಕಂಡಿದ್ದರು.

ಈ ಎಲ್ಲಾ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಅವರು ಕನ್ನಡ ಚಿತ್ರರಂಗಕ್ಕೆ ಬಾಲನಟನಾಗಿ ಪ್ರವೇಶ ಪಡೆದು ನಂತರ ನಾಯಕ ನಟರಾಗಿ ದಕ್ಷಿಣ ಭಾರತದ ಎಲ್ಲಾ ಭಾಷೆಗಳು ಸೇರಿದಂತೆ ಹಿಂದಿ ಚಲನಚಿತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿರುವ ಪ್ರತಿಭಾವಂತ ನಟ.

50 ವರ್ಷಗಳ ಅವಿರತ ಸೇವೆ ಸಲ್ಲಿಸಿರುವ 62 ವರ್ಷದ ಅರ್ಜುನ್ ಸರ್ಜಾ ಅವರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿರುವ ವಿಚಾರದಲ್ಲಿ ಕನ್ನಡ ಸಿನಿ ಪ್ರೇಕ್ಷಕರಿಗೆ ಸಂತಸ ತಂದಿದೆ ಎಂದು ರಘು ಗೌಡ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";