ಆತ್ಮನಿರ್ಭರ ಭಾರತಕ್ಕಾಗಿ ಸ್ವದೇಶಿ ಪ್ರತಿಜ್ಞೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಮನ್ ಕೀ ಬಾತ್ ಕಾರ್ಯಕ್ರಮವನ್ನು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ವೀಕ್ಷಿಸಲಾಯಿತು.

GST ಕಡಿತಗೊಳಿಸಿರುವ ಮಹತ್ವದ ನಿರ್ಧಾರ ಕೈಗೊಂಡಿದ್ದು ದೇಶದೆಲ್ಲೆಡೆ GST ನವರಾತ್ರಿಉತ್ಸವ ವನ್ನು ಪ್ರತಿಯೊಬ್ಬ ದೇಶವಾಸಿಗಳು ತಮ್ಮ ನಿತ್ಯ ಬದುಕಿನ ಹೊರೆ ಇಳಿಕೆಯ ಸಂಭ್ರಮದಲ್ಲಿದ್ದು ಎಲ್ಲರೂ ಸ್ವದೇಶಿ ವಸ್ತುಗಳನ್ನು ಬಳಸುವ ಮೂಲಕ ಮನೆ ಮನೆಗಳಲ್ಲೂ ಸ್ವದೇಶಿ ಮನ ಮನಗಳಲ್ಲೂ ಸ್ವದೇಶಿ ಜಾಗೃತಿ ಮೂಡಿಸುವ ಸಂಕಲ್ಪಿತ ಕರೆ ನೀಡಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರೊಂದಿಗೆ ಆತ್ಮನಿರ್ಭರ ಭಾರತ ಸ್ವದೇಶಿ ಪ್ರತಿಜ್ಞೆ ಸ್ವೀಕರಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

- Advertisement - 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಶಾಸಕರಾದ ನೆ.ಲ.ನರೇಂದ್ರಬಾಬು, ವೈ.ಎ.ನಾರಾಯಣಸ್ವಾಮಿ, ಕಲಾವಿದರಾದ ತಾರಾ ಅನುರಾಧಾ, ಶೃತಿ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಎಸ್.ಹರೀಶ್, ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

- Advertisement - 

 

 

Share This Article
error: Content is protected !!
";