ಜಿಪಂ ನೂತನ ಸಿಇಒ ಡಾ.ಆಕಾಶ್ ಅಧಿಕಾರ ಸ್ವೀಕಾರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಎಸ್.ಆಕಾಶ್ ಅವರು ಬುಧವಾರ ಅಧಿಕಾರ ಸ್ವೀಕಾರ ಮಾಡಿದರು.

ಜಿ.ಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಜೆ.ಸೋಮಶೇಖರ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಡಾ.ಎಸ್.ಆಕಾಶ್ ಅವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಳಿಸಿದೆ.

- Advertisement - 

ಡಾ.ಎಸ್.ಆಕಾಶ್ ಅವರು 2019ನೇ ಸಾಲಿನ ಕರ್ನಾಟಕ ಕೇಡರ್‍ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರಿಗೆ ನಿರ್ಗಮಿತ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.

 

- Advertisement - 

 

Share This Article
error: Content is protected !!
";