ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಮನುಕುಲದ ಒಳಿತಿಗೆ ಬೃಹತ್ ಜ್ಯೋತಿಯಂತೆ ಬೆಳಗಿ ಸಂದೇಶ ಸಾರಿದವರು ಡಾ.ಬಿ.ಆರ್.ಅಂಬೇಡ್ಕರ್” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟು ಶ್ರೇಷ್ಠ ಸಂವಿಧಾನ ಕೊಡಮಾಡಿರುವ ಬಾಬಾ ಸಾಹೇಬರ ಅನನ್ಯ ಕೊಡುಗೆಗಳನ್ನು ವಿಜಯೇಂದ್ರ ಸ್ಮರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.