ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಅರ್ಪಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ಸಂಸದರಾದ ಜಿ.ಸಿ ಚಂದ್ರಶೇಖರ್, ಸಚಿವರಾದ ಆರ್.ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ರಾಣಿ ಸತೀಶ್, ಕೆಪಿಸಿಸಿ ಎಸ್.ಸಿ ಘಟಕದ ಅಧ್ಯಕ್ಷ ಧರ್ಮಸೇನ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಮಾಜಿ ಎಂಎಲ್‌ಸಿಗಳಾದ ಎಂ. ನಾರಾಯಣ ಸ್ವಾಮಿ, ಪಿ.ಅರ್ ರಮೇಶ್, ಕೆಪಿಸಿಸಿ ಅಧ್ಯಕ್ಷರರಾಜಕೀಯ ಮತ್ತು ಮಾಧ್ಯಮ ಕಾರ್ಯದರ್ಶಿ ದೀಪಕ್ ತಿಮ್ಮಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.