ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ 2023ನೇ ಸಾಲಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಮೈಸೂರಿನ ಹರಿಹರಾ ನಂದ ಸ್ವಾಮಿ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಬೆಂಗಳೂರಿನ ಇಂದೂಧರ ಹೊನ್ನಾಪುರ, ಆಡಳಿತ ಕ್ಷೇತ್ರದಲ್ಲಿ ದಾವಣಗೆರೆಯ ರುದ್ರಪ್ಪ ಹನಗವಾಡಿ, ದೇವದಾಸಿ ವಿಮೋಚನೆ ಕ್ಷೇತ್ರದಲ್ಲಿ ಬೆಳಗಾವಿಯ ಸೀತವ್ವ ಜೋಡಟ್ಟಿ ಹಾಗೂ ಸಮಾಜ ಸೇವೆ, ರಾಜಕೀಯ ಕ್ಷೇತ್ರದಿಂದ ಬೀದರ್ನ ಕೆ.ಪುಂಡಲೀಕರಾವ್ ಶೆಟ್ಟಿಬಾ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
2024ನೇ ಸಾಲಿಗೆ ಹೋರಾಟ ಕ್ಷೇತ್ರದಿಂದ ಬೆಂಗಳೂರಿನ ಶ್ರೀಧರ ಕಲಿವೀರ, ಸಮಾಜ ಸೇವೆ, ರಾಜಕೀಯ ಕ್ಷೇತ್ರದಿಂದ ಮಂಡ್ಯದ ಮಲ್ಲಾಜಮ್ಮ, ಪತ್ರಿಕೋದ್ಯಮ ಕ್ಷೇತ್ರದಿಂದ ಬೆಂಗಳೂರಿನ ರಾಮದೇವರ ರಾಕೆ, ಸಾಹಿತ್ಯ/ಸಮಾಜ ಕ್ಷೇತ್ರದಿಂದ ಬೆಳಗಾವಿಯ ವೈ.ಬಿ.ಹಿಮ್ಮಡಿ ಹಾಗೂ ಸಾಹತ್ಯ/ಸಂಘಟನೆ ಕ್ಷೇತ್ರದಿಂದ ಕೋಲಾರದ ಲಕ್ಷ್ಮೀಪತಿ ಕೋಲಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
2025ನೇ ಸಾಲಿಗೆ ಪ್ರಕಾಶನ ಕ್ಷೇತ್ರದಿಂದ ಕಲಬುರುಗಿಯ ದತ್ತಾತ್ರೇಯ ಇಕ್ಕಳಗಿ, ಹೋರಾಟ ಕ್ಷೇತ್ರದಿಂದ ಬೆಂಗಳೂರಿನ ಮಾವಳ್ಳಿ ಶಂಕರ್ ಹಾಗೂ ಧಾರವಾಡದ ಎಫ್.ಹೆಚ್.ಜಕ್ಕಪ್ಪನವರ್, ಜನಪದ ಕಲೆ ಕ್ಷೇತ್ರದಿಂದ ಚಾಮರಾಜನಗರದ ಹೊನ್ನೂರು ಗೌರಮ್ಮ ಹಾಗೂ ದಲಿತ ಹೋರಾಟ ಕ್ಷೇತ್ರÀದಿಂದ ಈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ರಾಧಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹಮ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹ್ಮದ್, ಡಾ. ಕೆ. ಗೋವಿಂದರಾಜು,
ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಬಂಡಾರಿ, ಮಾಜಿ ಸಚಿವರಾದ ಹೆಚ್. ಆಂಜನೇಯ, ಚಿತ್ರದುರ್ಗ ಲೋಕಸಭಾ ಮಾಜಿ ಸಂಸದ ಚಂದ್ರಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಆರ್. ಸಂಪತ್ ರಾಜ್, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್,
ಕರ್ನಾಟಕ ಬೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್. ಎಸ್., ಕರ್ನಾಟಕ ಅಲೆಮಾರಿ / ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ. ಮಣಿವಣ್ಣನ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ. ರಾಕೇಶ್ ಕುಮಾರ್ ಕೆ ಸೇರಿದಂತೆ ಶಾಸಕರು, ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.