ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ : ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವ ವಿದ್ಯಾಲಯಗಳಲ್ಲಿ ಮಾನವೀಯ ಅಧ್ಯಯನ, ಸಮಾಜ ವಿಜ್ಞಾನ, ಸಮುದಾಯ ವೈದ್ಯಕೀಯ ಸೇರಿದಂತೆ ಇತರೆ ಸಮಾಜ ಹಾಗೂ

ಸಮುದಾಯ ಅಧ್ಯಯನ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಪರಿಶಿಷ್ಟ ಜಾತಿ ಸೇರಿದ ಓರ್ವ ಮಹಿಳಾ ಹಾಗೂ ಪುರುಷ ವಿದ್ಯಾರ್ಥಿಗಳಿಗೆ ತಲಾ ರೂ.50 ಲಕ್ಷಗಳನ್ನು ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್   https://igccd.karnataka.gov.in  ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25578422 ಹಾಗೂ ಇಮೇಲ್  [email protected]    ಸಂಪರ್ಕಿಸುವAತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";