ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ದಮನಿತರ ಆತ್ಮಗೌರವವನ್ನು ಎತ್ತಿ ಹಿಡಿದ ಭಾರತದ ಅಂತಃಶಕ್ತಿ ಡಾ.ಬಿಆರ್ ಅಂಬೇಡ್ಕರ್” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್.ಅಂಬೇಡ್ಕರ್‌ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಬಾಬಾ ಸಾಹೇಬ್ ಅಂಬೇಡ್ಕರ್‌ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.
ದಮನಿತರಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅವರ ಅನನ್ಯ ಕೊಡುಗೆಗಳನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಮಾಜಿ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ.ಮಂಜುಳಾ,
ಜಿಲ್ಲಾಧ್ಯಕ್ಷರಾದ ಎಸ್ . ಹರೀಶ್, ಸಪ್ತಗಿರಿ ಗೌಡ, ಮುಖಂಡರಾದ ಜಗದೀಶ್ ಹಿರೇಮನಿ, ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

